ಅಸ್ತಿ ಭಾತಿಯೆಂಬ ಬ್ಥಿತ್ತಿಯ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಸ್ತಿ ಭಾತಿಯೆಂಬ ಬ್ಥಿತ್ತಿಯ ಮೇಲೆ,

ಕ್ರೀ ನಾಮ ರೂಪವೆಂಬ ಚಿತ್ರ ಬರೆಯಿತ್ತು.

ಇಲ್ಲದ ಬ್ಥಿತ್ತಿಯ ಮೇಲೆ ಉಂಟೆಂಬ ಚಿತ್ರದಂತಿರ್ದಿತ್ತು.

ಅದೆಂತೆಂದಡೆ;

ಅಸ್ತಿ ಭಾತಿ ಪ್ರಿಯಂ ರೂಪಂ ನಾಮ ಚೇತ್ಯಂಶಪಂಚಕಂ

ಆದ್ಯತ್ರಯಂ ಬ್ರಹ್ಮರೂಪಂ ಮಾಯಾರೂಪಂ ತತೋದ್ವಯಂ ಎಂದುದಾಗಿ-

ಎನಗಿದೇ ಮಾಯೆಯಾಗಿ ಕಾಡಿತ್ತು, ಕೂಡಲಸಂಗಮದೇವಾ.