ಅಹಹ ಮೋಸ ಹೋದೆನಯ್ಯ
ಗೋಚರ
ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ |ಪ|
ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ |ಅ|
ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ |1|
ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ |2|
ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ |3|