ಆಕಾರನಿರಾಕಾರವೆಂಬೆರಡೂ ತಾನೆ; ದಿಟ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಕಾರನಿರಾಕಾರವೆಂಬೆರಡೂ ತಾನೆ; ದಿಟ ದಿಟ ತಪ್ಪದು ಕೇಳಾ. ಆಕಾರಕ್ಕೆ ಭಾವವೆ ಪ್ರಾಣ (ಪ್ರಮಾಣ?) ನಿರಾಕಾರಕ್ಕೆ ಮಹಾಜ್ಞಾನವೆ ಪ್ರಾಣ (ಪ್ರಮಾಣ?)_ ಇಂತೀ ಉಭಯಕುಳಕ್ಕೆ ಇದು ಲಕ್ಷಣ ಕೇಳಾ. ಎರಡರೊಳಗೆ ಆವ ಮುಖದಲ್ಲಿ ಇಪ್ಪಾತನು
ಆ ಮುಖದಲ್ಲಿ ಶುದ್ಧನಾಗದನ್ನಕ್ಕರ ಗುಹೇಶ್ವರಲಿಂಗಕ್ಕೆ ದೂರ ಕೇಳಾ ಸಂಗನಬಸವಣ್ಣಾ.