ಆಕಾಶದಂತರಂಗದಲ್ಲಿ ತೋರುವ ಸಕಲ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆಕಾಶದಂತರಂಗದಲ್ಲಿ ತೋರುವ ಸಕಲ ವರ್ಣಂಗಳ ವರ್ಣಿಸುವರು
ನಿರವಯದ ನಿಲವನೆತ್ತ ಬಲ್ಲರು ? ಅರಿವನಾಶ್ರಯಿಸಿ ಮನವ ಮುಂದುಗೊಂಡು ನೆನಹಿಂಗೆ ಗುರಿಯಾದವರೆಲ್ಲರೂ ನಿರವಯದ ನಿಲವನೆತ್ತ ಬಲ್ಲರು ? ವರ್ಣನಾಮವಳಿಯದಾಗಿ. ಆಕಾಶದಂತರಂಗ ಬಹಿರಂಗವೆನಲಿಲ್ಲದ ನಿರವಯವು ! ಗುಹೇಶ್ವರನೆನಲಿಲ್ಲದ ನಿಲವಿಗೆ ಸೊಲ್ಲು ಸಲ್ಲುವುದೆ ?