ಆಕಾಶದಲ್ಲಾಡುವ ಪಕ್ಷಿ ಆಕಾಶವ

ವಿಕಿಸೋರ್ಸ್ದಿಂದ



Pages   (key to Page Status)   


ಆಕಾಶದಲ್ಲಾಡುವ ಪಕ್ಷಿ ಆಕಾಶವ ನುಂಗಿ ಮಹದಾಕಾಶದಲ್ಲಾಡುತ್ತಿದ್ದಿತ್ತು. ಆಡುವ ಪಕ್ಷಿಯೊಳಗಾದ ಆಕಾಶದ ಪಕ್ಷಿಗೆ ತೆರಪುಗೊಟ್ಟ ಮಹದಾಕಾಶವನೊಂದು ಶಂಕೆಯಲ್ಲಿ ಷಡಾಂಗವಾ ಎಲೆಯುದುರಿದ ವೃಕ್ಷದಂತುಲುಹಡಗಿದ ಶರಣ
ಗಗನದ ಪರಿ. ಬೆಳಗಿನೊಳಗೆಂಬುದು ಮುನ್ನಿಲ್ಲವೋ ವಾಯುರೂಪಿನ ಪರಿಯಂತುಟಲ್ಲವೊ
ಪ್ರಾಣಲಿಂಗ ಲಿಂಗಪ್ರಾಣವೆಂಬುದು ಮುಂದಿಲ್ಲವೊ. ಯಥಾಲಿಂಗ ತಥಾ ಶರಣನೆಂಬುದು ಮುನ್ನಿಲ್ಲವೋ. ನಾನೂ ಇಲ್ಲ ನೀನೂ ಇಲ್ಲ ಮತ್ತೇನೂ ಏನೂ ಇಲ್ಲವೋ ಗುಹೇಶ್ವರನೆಂಬ ಲಿಂಗ ನಿಶ್ಚಿಂತ ನಿರ್ವಯಲವೋ