Library-logo-blue-outline.png
View-refresh.svg
Transclusion_Status_Detection_Tool

ಆಕಾಶದಲ್ಲಿ ಬೇರೆ ತೋರಿದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಆಕಾಶದಲ್ಲಿ ತೋರಿದ ಇಂದ್ರಧನು ಅಡಗುವುದಕ್ಕೆ ಆಕಾಶವೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಗಾಳಿಯಲ್ಲಿ ತೋರಿದ ಸುಳಿಗಾಳಿ ಅಡಗುವುದಕ್ಕೆ ಆ ಗಾಳಿಯೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಅಗ್ನಿಯಿಂದ ತೋರಿದ ಕಿಡಿಗಳು ಅಡಗುವುದಕ್ಕೆ ಆ ಅಗ್ನಿಯೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಸಮುದ್ರದಲ್ಲಿ ತೋರಿದ ನೊರೆತೆರೆ ತುಂತುರ್ವನಿ ಅಡಗುವುದಕ್ಕೆ ಆ ಸಮುದ್ರವೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಆದಿ ಅನಾದಿಯಿಂದತ್ತತ್ತಲಾದ ಮಹಾಘನವಸ್ತುವಿನಲ್ಲಿ ರೂಪಿಸಿ ತೋರಿದ ನಿಜೈಕ್ಯನಡಗುವುದಕ್ಕೆ ಆ ಪರವಸ್ತುವೆ ಆಶ್ರಯವಲ್ಲದೆ
ಬೇರೆ ಆಶ್ರಯವುಂಟೆ ಅಯ್ಯಾ ಅಖಂಡೇಶ್ವರಾ.