ಆಕಾಶವ ನುಂಗಿದ ಸರ್ಪನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಕಾಶವ ನುಂಗಿದ ಸರ್ಪನ ಫಣಿಯ ಮಣಿಯೊಳಗಣ ಕಪ್ಪೆ
ವಾಯುವನಲನ ಸಂಚವ ನುಂಗಿತ್ತದೇನೊ ? ರೂಹಿಲ್ಲದ ತಲೆಗೆ
ಮೊಲೆ ಮೂರಾಯಿತ್ತ ಕಂಡೆ ! ಉಂಡಾಡುವ ಶಿಶುವಿನ ಕೈಯಲ್ಲಿ ಮಾಣಿಕದಾರತಿಯ ಕಂಡೆ ! ಕಾಯವಿಲ್ಲದ ಹೆಣನ ವಾಯುವಿಲ್ಲದೆ ಜವನೆಳೆದೊಯ್ದನೆಂಬ ವಾಯಕ್ಕೆ ವಾಯವನೇನೆಂಬೆ ಗುಹೇಶ್ವರಾ !