ಆಕಾಶ ಒಂದಂಡಜ, ಪೃಥ್ವಿ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆಕಾಶ ಒಂದಂಡಜ
ಪೃಥ್ವಿ ಒಂದಂಡಜ (ಒಂದು ಪಿಂಡಜ?) ಆ ಎರಡರ ಮಧ್ಯದಲ್ಲಿ ಪಕ್ಷಿ ಮರಿಗಳನಿಕ್ಕಿತ್ತ ಕಂಡೆ. ತುಪ್ಪುಳು ಬಾರದು ಅದರೊಪ್ಪವನೇನೆಂಬೆನು ಗುರುವೆ ? ಬಯಲನೆ ಉಡುಗಿತ್ತು ನಿರ್ವಯಲನೆ ಗೂಡು ಮಾಡಿತ್ತು
ಉರಿಯನೆ ಉಂಡಿತ್ತು ಮಧುರಸವನೆ ಹಿಂಡಿತ್ತ ಕಂಡೆ. ಪಕ್ಷಿಗೆ ಪಕ್ಕ ಬಂದಿತ್ತು ಗಗನಕ್ಕೆ ಹಾರಿತ್ತು ! ಹಾರಿ ಹೋಗುತ್ತ ನಮ್ಮ ಗುಹೇಶ್ವರಲಿಂಗವ ಕೂಡಿತ್ತ ಕಂಡೆ !