ಆಗ್ಘವಣಿ ಪತ್ರೆ ಪುಷ್ಪ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಗ್ಘವಣಿ ಪತ್ರೆ ಪುಷ್ಪ ಧೂಪ ದೀಪ ನಿವಾಳಿಯಲ್ಲಿ ಪೂಜಿಸಿ ಪೂಜಿಸಿ ಬಳಲುತ್ತೈದಾರೆ. ಏನೆಂದರಿಯರು ಎಂತೆಂದರಿಯರು. ಜನ ಮರುಳೊ ಜಾತ್ರೆ ಮರುಳೊ ಎಂಬಂತೆ; ಎಲ್ಲರೂ ಪೂಜಿಸಿ
ಏನನೂ ಕಾಣದೆ
ಲಯವಾಗಿ ಹೋದರು ಗುಹೇಶ್ವರಾ.