ಆಗ ಹುಟ್ಟಿ ಬೇಗ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಗ ಹುಟ್ಟಿ ಬೇಗ ಸಾವ ಕಾಯಗೊಂಡ ಮಾನವಾ
ನೀ ದೇವರೆನಿಸಿಕೊಂಬುದೊಂದು ಆವುದಂತರ ಹೇಳಾ ? ದೇವರು ಸಾವಡೆ
ದೇವರಿಗೂ ಸಾವರಿಗೂ ಆವುದಂತರ ಹೇಳಾ ? ದೇವರಿಗೆ ದೇವಲೋಕ
ಮಾನವರಿಗೆ ಮತ್ರ್ಯಲೋಕ
ಗುಹೇಶ್ವರ ಅಲ್ಲಯ್ಯಂಗೆ ಇನ್ನಾವ ಲೋಕವೂ ಇಲ್ಲ.