ವಿಷಯಕ್ಕೆ ಹೋಗು

ಆಚಾರಲಿಂಗಕ್ಕೆ ಗುರುಲಿಂಗವೇ ಪ್ರಾಣ.

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಆಚಾರಲಿಂಗಕ್ಕೆ ಗುರುಲಿಂಗವೇ ಪ್ರಾಣ. ಗುರುಲಿಂಗಕ್ಕೆ ಶಿವಲಿಂಗವೇ ಪ್ರಾಣ. ಶಿವಲಿಂಗಕ್ಕೆ ಜಂಗಮಲಿಂಗವೇ ಪ್ರಾಣ. ಜಂಗಮಲಿಂಗಕ್ಕೆ ಪ್ರಸಾದಲಿಂಗವೇ ಪ್ರಾಣ. ಪ್ರಸಾದಲಿಂಗಕ್ಕೆ ಮಹಾಲಿಂಗವೇ ಪ್ರಾಣ. ಇಂತಿವು ಒಂದಕ್ಕೊಂದು ಪ್ರಾಣವಾಗಿಪ್ಪುದಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.