ಆಚಾರಲಿಂಗವಿಡಿದು ಗುರುಲಿಂಗವ ಕಾಣಬೇಕು. ಗುರುಲಿಂಗವಿಡಿದು ಶಿವಲಿಂಗವ ಕಾಣಬೇಕು. ಶಿವಲಿಂಗವಿಡಿದು ಜಂಗಮಲಿಂಗವ ಕಾಣಬೇಕು. ಜಂಗಮಲಿಂಗವಿಡಿದು ಪ್ರಸಾದಲಿಂಗವ ಕಾಣಬೇಕು. ಪ್ರಸಾದಲಿಂಗವಿಡಿದು ಮಹಾಲಿಂಗವ ಕಾಣಬೇಕು. ಇಂತೀ ಷಡುಸ್ಥಲದ ಧಾತುವ ಸಂಬಂಧಿಸಿ ಒಂದು ಮಾಡಿಕೊಂಡಿಪ್ಪ ಈ ಕರಸ್ಥಲದ ಅನುವ ಗುಹೇಶ್ವರನ ಶರಣ ಸಂಗನಬಸವಣ್ಣ ಬಲ್ಲ
ಬೆಸಗೊಂಬ ಬಾರಾ ಸಿದ್ಧರಾಮಯ್ಯಾ