ಆಚಾರವಂಗಲೇಪವಾಗಿ
ಕಾಯಮುಕ್ತನು ನೀನು ನೋಡಯ್ಯಾ. ಅರಿವು ಅಂತರಂಗದಲ್ಲಿ ಭರಿತವಾಗಿಪ್ಪುದಾಗಿ
ಮನೋಮುಕ್ತನು ನೀನು ನೋಡಯ್ಯಾ. ಅರ್ಪಿತ ಪರಿಣಾಮದಲ್ಲಿ ಅವಿರಳವಾಗಿಪ್ಪುದಾಗಿ ಸರ್ವಾಂಗಲಿಂಗೈಕ್ಯನು ನೀನು ನೋಡಯ್ಯಾ. ಮುಕ್ತನಲ್ಲೆಂಬ ಬಳಕೆಯ ಮಾತಂತಿರಲಿ
ಬಯಲ ಭ್ರಮೆಯ ಕಳೆದು ಭವದ ಬಟ್ಟೆಯ ಹರಿದಿಪ್ಪುದ ನಮ್ಮ ಗುಹೇಶ್ವರಲಿಂಗ ಬಲ್ಲನು ನೀನು ಮರೆಯಾಗಿ ನುಡಿವರೆ ಸಂಗನಬಸವಣ್ಣಾ.