ವಿಷಯಕ್ಕೆ ಹೋಗು

ಆಚಾರವರಿಯದೆ, ವಿಭವವಳಿಯದೆ, ಕೋಪವಡಗದೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಆಚಾರವರಿಯದೆ
ವಿಭವವಳಿಯದೆ
ಕೋಪವಡಗದೆ ತಾಪ ಮುರಿಯದೆ
ಬರಿದೆ ಭಕ್ತರಾದೆವೆಂದು ಬೆಬ್ಬನೆ ಬೆರೆಯುವ ಕೇಡಿಂಗೆ ನಾನು ಮರುಗುವೆ ಕಾಣಾ ಗುಹೇಶ್ವರಾ.