ಆಚಾರವಿಲ್ಲದ ಗುರು ಭೂತಪ್ರಾಣಿ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆಚಾರವಿಲ್ಲದ ಗುರು ಭೂತಪ್ರಾಣಿ ಆಚಾರವಿಲ್ಲದ ಲಿಂಗ ಶಿಲೆ. ಆಚಾರವಿಲ್ಲದ ಜಂಗಮ ಮಾನವ. ಆಚಾರವಿಲ್ಲದ ಪಾದೋದಕ ನೀರು. ಆಚಾರವಿಲ್ಲದ ಪ್ರಸಾದ ಎಂಜಲು. ಆಚಾರವಿಲ್ಲದ ಭಕ್ತ ದುಃಕರ್ಮಿ. ಇದು ಕಾರಣ
ಅಟ್ಟವನೇರುವುದಕ್ಕೆ ನಿಚ್ಚಣಿಗೆಯೆ ಸೋಪಾನವಯ್ಯ. ಹರಪದವನೆಯ್ದುವರೆ ಶ್ರೀ ಗುರು ಹೇಳಿದ ಸದಾಚಾರವೆ ಸೋಪಾನವಯ್ಯ. ಗುರುಪದೇಶವ ಮೀರಿ
ಮನಕ್ಕೆ ಬಂದಂತೆ ವರ್ತಿಸುವ ಪಾಪಿಗಳ ಎನಗೊಮ್ಮೆ ತೋರದಿರಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.