ಆಚಾರವೆಂಬ ಬಿಲ್ಲಿಗೆ ವಿಚಾರವೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಚಾರವೆಂಬ ಬಿಲ್ಲಿಗೆ ವಿಚಾರವೆಂಬ ನಾರಿ
ಸಮತೆಯೆಂಬ ತಿರುವ ಮೆಟ್ಟಿ ಜೇವೊಡೆಗೆಯ್ದು
ಶಿಷ್ಯನೆಂಬ ಬಾಣವ ತೊಡಚಿ
ಗುರುವೆಂಬ ವ್ಯಾಧನು ಲಿಂಗವೆಂಬ ಬಯಲ ಗುರಿಯನೆಚ್ಚಡೆ
ಗರಿ ತೋರದಂತೆ ಮುಳುಗಿ ಅಡಗಿತ್ತು. ಆ ಗರಿಯನು ಬಾಣವನು ಅರಸಲುಂಟೆ
ಕೂಡಲಚೆನ್ನಸಂಗಾ ನಿಮ್ಮಲ್ಲಿ ?