ಆಚಾರ ಅನಾಚಾರವೆಂದಡೆ ಹೇಳಿಹೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಚಾರ ಅನಾಚಾರವೆಂದಡೆ ಹೇಳಿಹೆ ಕೇಳಿರಣ್ಣಾ : ಸರ್ವಪದಾರ್ಥಂಗಳ ಇದಿರಿಟ್ಟಲ್ಲಿ ಇಷ್ಟಲಿಂಗಕ್ಕೆ ಕೊಟ್ಟು ಪ್ರಸಾದವೆಂದು ಕೊಂಡು ಸುಯಿಧಾನವಿಲ್ಲದೆ ಸೂಸಿದಲ್ಲಿ
ದೂಷಿಸಿ ಪ್ರಸಾದದಲ್ಲಿ ಒಳ್ಳಿತು ಹೊಲ್ಲಹ ವಿಷ ಸಿಹಿ ಹುಳಿ ಸಪ್ಪೆಯೆಂದು ಜರೆದು ಝಂಕಿಸಿ ಬಿಡುವ ಕರ್ಮಿಗಳು ನೀವು ಕೇಳಿರೊ_ ಜ್ಯೋತಿಯ ತಂದು ಬತ್ತಿಯ ಮುಟ್ಟಿಸಲು ಜ್ಯೋತಿಯಪ್ಪಂತೆ ಕಾಣಿರೊ ಒಂದು ವೇಳೆ ಪ್ರಸಾದವೆಂದು ಕೊಂಡು
ಮತ್ತೊಂದು ವೇಳೆಯಲ್ಲಿ ಎಂಜಲೆಂದು ನಿಂದಿಸುವ ಪ್ರಸಾದದ್ರೋಹಿಗಳಿಗೆ ದೇವಭಕ್ತರೆನ್ನಲಾಗದು. ಅವರಿಗೆ ಸೂರ್ಯಚಂದ್ರರುಳ್ಳನ್ನಕ್ಕ ನರಕ. ಎಕ್ಕಲನರಕದಲ್ಲಿ ಮುಳುಗಾಡುತ್ತಿಪ್ಪವರ ಮುಖವನೆನಗೆ ತೋರದಿರಾ ಗುಹೇಶ್ವರ.