ವಿಷಯಕ್ಕೆ ಹೋಗು

ಆಚಾರ ಅನಾಚಾರವೆಂದು ಎರಡು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆಚಾರ ಅನಾಚಾರವೆಂದು ಎರಡು ಪ್ರಕಾರವಾಗಿಪ್ಪುದು. ಆಚಾರವೆಂದಡೆ ಹೇಳಿಹೆ ಕೇಳಿರೊ: ಸರ್ವಪದಾರ್ಥಂಗಳು ಇದಿರಿದ್ದಲ್ಲಿ ಆ ಪದಾರ್ಥಂಗಳ ಶುದ್ಧವ ಮಾಡಿ ಲಿಂಗಕ್ಕೆ ಸಮರ್ಪಿಸುವಲ್ಲಿ ಭೋಜ್ಯಭೋಜ್ಯಕ್ಕೆ ಶಿವಮಂತ್ರಯುಕ್ತನಾಗಿ ಪ್ರಸಾದಗ್ರಾಹಕನಾಗಿರಬಲ್ಲಡೆ ಆತನೆ ಪ್ರಸಾದಿ
ವೀರಮಾಹೇಶ್ವರನೆಂಬೆ. ತಟ್ಟುವ ಮುಟ್ಟುವ ತಾಗು[ವ] ನಿರೋಧವೆಲ್ಲವನು ಹಲ್ಲುಕಡ್ಡಿ ದರ್ಪಣ ಮೊದಲಾದ ಸರ್ವವ್ಯವಹಾರದಲ್ಲಿ ಆವುದಾನೊಂದು ಭೋಗಿಸಲು
ಆವುದಾನೊಂದು ಕ್ರೀಡಿಸಲು ಲಿಂಗವೆ ಪ್ರಾಣವಾಗಿರಬಲ್ಲಡೆ ಆ ಮಹಾಂತನೆ ಸರ್ವಾಚಾರಸಂಪನ್ನನೆಂಬೆ. ಅಂತಪ್ಪ ಮಹಾತ್ಮನ ತ್ರಿವಿಧಮುಖವನರಿದು ಕರುಣಪೂರಿತನಾಗಿ ಪ್ರಸಾದವ ಕೊಂಡಡೆ ಪಾವನವೆಂಬೆ ಆತನ ಕೇವಲ ಮಹಾನುಭಾವ ಪರಮಜ್ಞಾನಪರಿಪೂರ್ಣನೆಂಬೆ
ಆ ಮಹಾತ್ಮನೆ ತ್ರೈಜಗದೊಡೆಯನೆಂಬೆ ಗುಹೇಶ್ವರಾ.