ಆಚಾರ ಸನ್ನಹಿತವಾಗಿ ಬಂದಡೆ
ಜಂಗಮ ಬೇರಲ್ಲದಿರ್ದಡೆ ಭೂತಪ್ರಾಣಿ ಎಂಬೆ. ಅರ್ತಿಯಲ್ಲಿ ಲಿಂಗವೆ ಜಂಗಮವೆಂದರಿದು ಮಾಡುವಲ್ಲಿ
ಭಕ್ತನಲ್ಲದಿರ್ದಡೆ ಫಲದಾಯಕನೆಂಬೆ. ಸ್ಥಾವರ ಜಂಗಮ ಒಂದೆ ಎನಬಲ್ಲಡೆ
ಶರಣ ಸಂಬಂಧಿ
ಅಲ್ಲದಿರ್ದಡೆ ಪೂಜಕನೆಂಬೆ. ಇಂತೀ ತ್ರಿವಿಧ ನಿರ್ಣಯದ ಸೋಂಕಿನ ಸುಖವ
ಗುಹೇಶ್ವರ ಲಿಂಗದಲ್ಲಿ ಬಸವಣ್ಣನೊಬ್ಬನೆ ಬಲ್ಲನು