ಆತ್ಮದೃಕ್ಕಿಂದ ಈಶ್ವರನ ತಿಳಿದಲ್ಲದೆ,
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆತ್ಮದೃಕ್ಕಿಂದ ಈಶ್ವರನ ತಿಳಿದಲ್ಲದೆ
ಜಾತಿಸ್ಮರತ್ವವ ಕಾಣಬಾರದು; ಜ್ಯೋತಿರ್ಮಯಲಿಂಗದಿಂದೊಗೆದ ಶರಣನ
ಏತರಿಂದ ಕಂಡು ಹೇಳುವಿರಣ್ಣ? ಮಾತಿನಿಂದ ಹೇಳಿಹೆನೆಂದಡೆ
ವಾಚಾತೀತ ಶಿವಶರಣನು. ವಾಙ್ಮನಕ್ಕಗೋಚರವಾದ ಮಹಾಘನ ಪರತತ್ವದಲುದಯವಾದ ಶರಣನ ಮಾತಿಗೆ ತಂದು ನುಡಿವ ಮರುಳುಮಾನವರನೇನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.