ವಿಷಯಕ್ಕೆ ಹೋಗು

ಆತ್ಮನಲ್ಲಿ ಪ್ರಣವಪಂಚಾಕ್ಷರಿಯ ನಿರವಿಸಿ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಆತ್ಮನಲ್ಲಿ ಪ್ರಣವಪಂಚಾಕ್ಷರಿಯ ನಿರವಿಸಿ
ಸದ್ಗುರುವೆ ಎನ್ನ ಶಿವಾತ್ಮನ ಮಾಡಿದಿರಾಗಿ
ಆತ್ಮಶುದ್ಧಿಯಾಯಿತ್ತೆನಗೆ. ಪಂಚಭೂತಂಗಳಲಿ ಪಂಚಬ್ರಹ್ಮನನಿರಿಸಿದಿರಾಗಿ
ಭೂತಶುದ್ಧಿಯಾಯಿತ್ತೆನಗೆ. ಅಂಡಜ ಜರಾಯುಜಾದಿ ಎಂಬತ್ತುನಾಲ್ಕುಲಕ್ಷ ಯೋನಿಯಲ್ಲಿ ಬಹ ಜೀವನ ಅಯೋನಿಜನ ಮಾಡಿದಿರಾಗಿ ಜೀವಶುದ್ಧಿಯಾಯಿತ್ತೆನಗೆ. ಅಂಗಾಶ್ರಯವ ಕಳೆದು ಲಿಂಗಾಶ್ರಯವ ಮಾಡಿದಿರಾಗಿ ಮನಶ್ಶುದ್ಧಿಯಾಯಿತ್ತೆನಗೆ. ಪಶುವೆಂಬ ಅಜ್ಞಾನದ್ರವ್ಯವ ಕಳೆದು ಪರಮಸುಜ್ಞಾನದ್ರವ್ಯವ ಮಾಡಿದಿರಾಗಿ ದ್ರವ್ಯಶುದ್ಧಿಯಾಯಿತ್ತೆನಗೆ. ಇಂತು ಸರ್ವಶುದ್ಧನಂ ಮಾಡಿ ಪೂರ್ವಾಶ್ರಯವ ಕಳೆದಿರಾಗಿ ಕೂಡಲಚೆನ್ನಸಂಗಾ
ನಿಮ್ಮುವ `ನ ಗುರೋರಧಿಕಂ ನ ಗುರೋರಧಿಕಂ ನ ಗುರೋರಧಿಕಂ : ಎನುತಿರ್ದೆನು.