ವಿಷಯಕ್ಕೆ ಹೋಗು

ಆತ್ಮನೇ ಅಂಗವಾದ ಐಕ್ಯನಲ್ಲಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಆತ್ಮನೇ ಅಂಗವಾದ ಐಕ್ಯನಲ್ಲಿ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣನಪ್ಪ ಅಂಗಪಂಚಕವು ಗರ್ಭೀಕೃತವಾಗಿ
ಆ ಐಕ್ಯಂಗೆ ಮಹಾಲಿಂಗ ಸಂಬಂಧವಾಗಿ ಆ ಮಹಾಲಿಂಗದಲ್ಲಿಯೇ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗವೆನಿಸುವ ಲಿಂಗಪಂಚಕವು ಗರ್ಭೀಕೃತವಾಗಿ
ಮಹಾಲಿಂಗವೇ ಆಶ್ರಯವಾಗಿ ಇಂತೀ ಷಡ್ವಿಧಲಿಂಗದಲ್ಲಿ ಬೆರಸಿ ಬೇರಿಲ್ಲದಿರಬಲ್ಲರೆ ಐಕ್ಯನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.