ಆತ್ಮಸಂಗವಾದವರ್ಗೆ ಬಹಿರ್ಭಾವವಿಲ್ಲ. ಇಂದ್ರಿಯಂಗಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆತ್ಮಸಂಗವಾದವರ್ಗೆ ಬಹಿರ್ಭಾವವಿಲ್ಲ. ಇಂದ್ರಿಯಂಗಳು ಲಿಂಗವಾದವರ್ಗೆ ವಿಷಯಸೂತಕವಿಲ್ಲ. ಕರಣಂಗಳು ಲಿಂಗವಾದವರ್ಗೆ ಹಿಂದು ಮುಂದೆಂಬ ಸಂದೇಹವಿಲ್ಲ. ಲಿಂಗಾಲಯವು ಮನವಾದವರ್ಗೆ ಇಹಪರವೆಂಬ ಸಂಶಯವಿಲ್ಲ. ಲೋಕದಂತೆ ನಡೆವರು ಲೋಕದಂತೆ ನುಡಿವರು
ಮನವು ಮಹಾಲಿಂಗದಲ್ಲಿ ಪರಿಣಾಮಿಗಳು ! ಅಂತಪ್ಪ ಮಹಾನುಭಾವಿಗಳ ಲೋಕದ ಪ್ರಪಂಚಿಗಳೆಂದಡೆ ಮನೋಮಧ್ಯದಲ್ಲಿಪ್ಪ ಜ್ಯೋತಿರ್ಲಿಂಗವು ನಗದಿಪ್ಪನೆ ಗುಹೇಶ್ವರಾ ?