ಆದಿತ್ಯ ಸೋಮರು ಆಗಿ ಹೋಗುತ್ತ ಇದ್ದಾರು. ಬ್ರಹ್ಮ ಪ್ರಳಯಕ್ಕೊಳಗಾದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆದಿತ್ಯ ಸೋಮರು ಆಗಿ ಹೋಗುತ್ತ ಇದ್ದಾರು. ಬ್ರಹ್ಮ ಪ್ರಳಯಕ್ಕೊಳಗಾದ, ಹರಿಯ ಸಿಂಹಾಸನವಡಗಿತ್ತು. ಆತೋ ನಾಸ್ತಿ, ಇತೋ ನಾಸ್ತಿ. ರೋಮಜರೆಂಬವರು ಸಿಟ್ಟುಗುಟ್ಟಿ ತರುಮರನಡಿಯಲ್ಲಿದ್ದರು. ಮಾರ್ಕಂಡೇಯಮಹಾಮುನಿ ಸ್ವೇಚ್ಛಾಮರಣಿ ಎನಿಸಿಕೊಂಡನಲ್ಲದೆ ಲಿಂಗದ ನಿಜವನರಿಯನು. ಇದು ಕಾರಣ ಕೂಡಲಸಂಗಮದೇವಾ, ನೀವು ಮಾಡಿದ ಬಯಲು ಭಕ್ಷಿಸಿತ್ತು, ಅನಂತ ಹಿರಿಯರನು. ಆದಿತ್ಯ ಸೋಮರು ಆಗಿ ಹೋಗುತ್ತ ಇದ್ದಾರು. ಬ್ರಹ್ಮ ಪ್ರಳಯಕ್ಕೊಳಗಾದ
ಹರಿಯ ಸಿಂಹಾಸನವಡಗಿತ್ತು. ಆತೋ ನಾಸ್ತಿ
ಇತೋ ನಾಸ್ತಿ. ರೋಮಜರೆಂಬವರು ಸಿಟ್ಟುಗುಟ್ಟಿ ತರುಮರನಡಿಯಲ್ಲಿದ್ದರು. ಮಾರ್ಕಂಡೇಯಮಹಾಮುನಿ ಸ್ವೇಚ್ಛಾಮರಣಿ ಎನಿಸಿಕೊಂಡನಲ್ಲದೆ ಲಿಂಗದ ನಿಜವನರಿಯನು. ಇದು ಕಾರಣ ಕೂಡಲಸಂಗಮದೇವಾ
ನೀವು ಮಾಡಿದ ಬಯಲು ಭಕ್ಷಿಸಿತ್ತು
ಅನಂತ ಹಿರಿಯರನು.