ಆದಿಯಲೊಬ್ಬ ಮೂರ್ತಿಯಾದ
ಆ ಮೂರ್ತಿಯಿಂದ ಸದಾಶಿವನಾದ
ಆ ಸದಾಶಿವನ ಮೂರ್ತಿಯಿಂದ ಜ್ಞಾನಶಕ್ತಿಯಾದಳು. ಆ ಸದಾಶಿವಂಗೆಯೂ ಜ್ಞಾನಶಕ್ತಿಯಿಬ್ಬರಿಗೆಯೂ ಶಿವನಾದ
ಆ ಶಿವಂಗೆ ಇಚ್ಛಾಶಕ್ತಿಯಾದಳು. ಆ ಶಿವಂಗೆಯೂ ಇಚ್ಛಾಶಕ್ತಿಯಿಬ್ಬರಿಗೆಯೂ ರುದ್ರನಾದ. ಆ ರುದ್ರಂಗೆ ಕ್ರಿಯಾಶಕ್ತಿಯಾದಳು. ಆ ರುದ್ರಂಗೆಯೂ ಕ್ರಿಯಾಶಕ್ತಿಯಿಬ್ಬರಿಗೆಯೂ ವಿಷ್ಣುವಾದ. ಆ ವಿಷ್ಣುವಿಂಗೆ ಮಹಾಲಕ್ಷ್ಮಿಯಾದಳು. ಆ ವಿಷ್ಣವಿಂಗೆಯೂ ಮಹಾಲಕ್ಷ್ಮಿಯಿಬ್ಬರಿಗೆಯೂ ಬ್ರಹ್ಮನಾದ. ಆ ಬ್ರಹ್ಮಂಗೆ ಸರಸ್ವತಿಯಾದಳು. ಆ ಬ್ರಹ್ಮಂಗೆಯೂ ಸರಸ್ವತಿಯರಿಬ್ಬರಿಗೆಯೂ ನರರು ಸುರರು ದೇವಕಳು ಹೆಣ್ಣು ಗಂಡು ಸಚರಾಚರಂಗ?ು ಸಹಿತವಾಗಿ ಎಂಬತ್ತುನಾಲ್ಕುಲಕ್ಷ ಜೀವಜಂತುಗಳು
ತೋರುವ ತೋರಿಕೆಯೆಲ್ಲ ಹುಟ್ಟಿತ್ತು ಕೂಡಲಚೆನ್ನಸಂಗಯ್ಯಾ.