ಆದಿಯಾಧಾರಮಂ ಮಾಡಿ, ಅಜಕೋಟಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಯಾಧಾರಮಂ ಮಾಡಿ
ಅಜಕೋಟಿ ಬ್ರಹ್ಮಾಂಡಂಗಳ ಮಾಡಿ ಈರೇಳು ಭುವನಂಗಳಂ ಮಾಡಿ ಹರ ಲೀಲೆಯಾಡುವಲ್ಲಿ_ ಹರಿವಿರಿಂಚಿಗಳ ಸುರಾಸುರರ ಶಿರೋಮಾಲೆಯನಿಕ್ಕಿ ಕುಣಿದಾಡುವಲ್ಲಿ ಪಾದ ರಸಾತಳಕ್ಕಿಳಿದು ಭುವನ ಜಲಮಯವಾದಲ್ಲಿ ಹಸ್ತ ಮಕುಟ ತಾಗಿ ಸಕಲಲೋಕಂಗಳೆಲ್ಲವೂ ನಿರವಯಲಾದಲ್ಲಿ ನಿಜದ ಬೆಳಗಿನ ಬೆಳಗಿನೊಳು `ಸ್ಯೋಹಂ' ಎನಲು
ವಿಚಾರದಿಂದ ಘನಮನವಾದಂದು
ಗುಹೇಶ್ವರಾ ನೀನೆ ಲಿಂಗ
ನಾನೆ ಜಂಗಮ
ಬಸವಣ್ಣನೇ ಭಕ್ತ !