ಆದಿಯ ತೋರಿದೆ ಅನಾದಿಯನರುಹಿದೆ. ಇಹವ ಕೆಡಿಸಿದೆ ಪರವ ನಿಲಿಸಿದೆ ಕಾಯಪ್ರಸಾದ ಭಾವಪ್ರಸಾದ ಜ್ಞಾನಪ್ರಸಾದವನು ಏಕವ ಮಾಡಿ ತೋರಿದೆ. ಪರವನೊಳಕೊಂಡು ಪರಿಣಾಮದಲ್ಲಿರಿಸಿದೆ. ಗುಹೇಶ್ವರನ ಶರಣ ಸಂಗನಬಸವಣ್ಣನ ಪೂರ್ವಾಪರವ ಹೇಳಿ ಎನ್ನನುಳಿಹಿಕೊಳ್ಳಾ ಚನ್ನಬಸವಣಾ