ಆದಿಯ ಮುಟ್ಟಿಬಂದ ಶರಣಂಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಯ ಮುಟ್ಟಿಬಂದ ಶರಣಂಗೆ ಬದ್ಧ(ಬಂಧ?)ವಿಲ್ಲಯ್ಯಾ. ಜನ್ಮಕೋಟಿ ಕ್ರೂರಕರ್ಮವ ಮಾಡಿದವಂಗೆ
ಸೋಂಕಿನ ಸೊಬಗ ಹೇಳಲಿ(ಲೇ?)ಕೆ ? ಅಂಗದಲ್ಲಿ ಲಿಂಗ ಸೋಂಕಿದ ಶರಣಂಗೆ
ಕಾಯದೊಳಗುಳ್ಳ ಕರಣಂಗಳು ಕಳಾಕುಳ ಕಳಾಭೇದವಯ್ಯಾ ಸುಖದ ಸೋಂಕಿನ ಸೊಬಗ
ಇನ್ನಾರಿಗೆಯೂ ಹೇಳಲಿಲ್ಲ ಗುಹೇಶ್ವರ.