ಆದಿಯ ಲಿಂಗ ನಿನ್ನಿಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಯ ಲಿಂಗ ನಿನ್ನಿಂದ ಎನಗಾಯಿತ್ತು. ಅನಾದಿಯ ಜ್ಞಾನ ನಿನ್ನ ನೆನೆದಡೆ ಎನಗಾಯಿತ್ತು. ನಿನ್ನ ಕೃಪೆಯಿಂದ ಪ್ರಾಣ ಲಿಂಗವೆಂದರಿದೆನೆಂಬುದ
ನಿಮ್ಮ ಪ್ರಮಥರೆ ಬಲ್ಲರು. ಗುಹೇಶ್ವರ ಸಾಕ್ಷಿಯಾಗಿ
ಸಂಗನಬಸವಣ್ಣ ನಿನ್ನ ಪ್ರಸಾದದ ಶಿಶು ನಾನು ನೋಡಯ್ಯಾ.