ಆದಿಶಕ್ತಿ ಅನಾದಿಶಕ್ತಿಯೆಂಬರು ಅದನಾರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಶಕ್ತಿ ಅನಾದಿಶಕ್ತಿಯೆಂಬರು ಅದನಾರು ಬಲ್ಲರಯ್ಯಾ ? `ಆದಿ' ಎಂದಡೆ ಕುರುಹಿಂಗೆ ಬಂದಿತ್ತು. `ಅನಾದಿ' ಎಂದಡೆ ನಾಮಕ್ಕೆ ಬಂದಿತ್ತು. ಆದಿಯೂ ಅಲ್ಲ ಅನಾದಿಯೂ ಅಲ್ಲ
ನಾಮವಿಲ್ಲದ ಸೀಮೆಯಿಲ್ಲದ ನಿಜಭಕ್ತಿಯೆ ಚಿಚ್ಛಕ್ತಿಯಾಯಿತ್ತು ನೋಡಾ. ಅಂತರಂಗದ ಪ್ರಭೆ ಬಹಿರಂಗವೆಲ್ಲಾ ತಾನೆಯಾಗಿ ಗುಹೇಶ್ವರಲಿಂಗದಲ್ಲಿ ಸಂದಿಲ್ಲದಿಪ್ಪ ಮಹಾದೇವಿಯಕ್ಕನ ಶ್ರೀಪಾದಕ್ಕೆ ನಮೋ ನಮೋ ಎಂಬೆನು