ಆದಿ ಅನಾದಿ ಎಂಬೆರಡರ ಮೂಲವನೆತ್ತಿ ತೋರಿದನಯ್ಯಾ ಬಸವಣ್ಣನು. ಆದಿ ಲಿಂಗ ಅನಾದಿ ಜಂಗಮವೆಂಬ (ಶರಣನೆಂಬ?) ಭೇದವ ವಿವರಿಸಿ ತೋರಿದನಯ್ಯಾ ಬಸವಣ್ಣನು. ಕಾಯದ ಜೀವದ ಸಂಬಂಧವ ಅಸಂಬಂಧವ ಮಾಡಿ ತೋರಿದನಯ್ಯಾ ಬಸವಣ್ಣನು. ಎನ್ನ ಆದಿ ಅನಾದಿಯನು ಬಸವಣ್ಣನಿಂದರಿದು ಗುಹೇಶ್ವರಲಿಂಗದಲ್ಲಿ ಸುಖಿಯಾದೆನು ಕಾಣಾ ಚನ್ನಬಸವಣ್ಣ.