ವಿಷಯಕ್ಕೆ ಹೋಗು

ಆದಿ ಅನಾದಿ ಹದಿನಾಲ್ಕುಲೋಕ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಆದಿ ಅನಾದಿ ಹದಿನಾಲ್ಕುಲೋಕ ಕಾಲ ಕಲ್ಪಿತ ಮಂತ್ರ ತಂತ್ರ ಓದು
ನೇಮ
ಸಂಧ್ಯಾ ಸಮಾಧಿ ಮೌಂಜಿ ಕರ್ಮ ನೀರು ನೇಣು ಯಜ್ಞೋಪವೀತ ಹುಟ್ಟದಂದು ಒಬ್ಬ ಶರಣ ಭಕ್ತಿಯ ಮಾಡುತ್ತಿಪ್ಪುದ ಕಂಡೆನಯ್ಯಾ. ಆ ಶರಣನ ಭಕ್ತಿಯೆಂಬ ಚಿತ್ಪಿಂಡದೊಳಗೆ ಎರಡುಸಾವಿರದೆಂಟುನೂರು ಕೋಟಿ ಯೋಜನದುದ್ದದೊಂದು ಮಹಾಲೋಕದಿಂದತ್ತಲರಿಯದಿಪ್ಪ ಷಡುಸಾದಾಖ್ಯನಾಯಕರ ಹೆಂಡಿರೆಲ್ಲಾ ಮೊಲೆದೆಗೆದು (ಓಲೆದೆಗೆದು?) ಹೋಯಿತ್ತ ಕಂಡೆ ಗುಹೇಶ್ವರಾ.