ಆದಿ ಆಧಾರವಿಲ್ಲದಂದು, ಹಮ್ಮುಬಿಮ್ಮುಗಳಿಲ್ಲದಂದು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆದಿ ಆಧಾರವಿಲ್ಲದಂದು
ಹಮ್ಮುಬಿಮ್ಮುಗಳಿಲ್ಲದಂದು ಸುರಾಳನಿರಾಳವಿಲ್ಲದಂದು
ಸಚರಾಚರವೆಲ್ಲ ರಚನೆಗೆ ಬಾರದಂದು
ಗುಹೇಶ್ವರಾ ನಿಮ್ಮ ಶರಣನುದಯಿಸಿದನಂದು.