ಆದಿ ಗುರುಸ್ಥಲ ಲಿಂಗಸ್ಥಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿ ಗುರುಸ್ಥಲ ಲಿಂಗಸ್ಥಲ ಜಂಗಮಸ್ಥಲ ಪ್ರಸಾದಸ್ಥಲ ಪಾದೋದಕಸ್ಥಲಂಗಳನಾರು ಬಲ್ಲರಯ್ಯಾ ? ಆದಿಯ ತೋರಿದ
ಅನಾದಿಯನರುಪಿದ
ನಾದ ಬಿಂದು ಕಳೆಗಳ ಭೇದಮಂ ಭೇದಿಸಿ ತೋರಿದ
ಹುಟ್ಟುವುದ ಮುಟ್ಟದೆ ತೋರಿದ ಹುಟ್ಟದೆ ಇದ್ದುದ ಮುಟ್ಟಿ ತೋರಿದ. ಎನ್ನ ಅಂತರಂಗವನನುಮಾಡಿ ನಿಜಲಿಂಗವ ನೆಲೆಗೊಳಿಸಿದ. ಗುಹೇಶ್ವರನ ಶರಣ ಸಂಗನಬಸವಣ್ಣನಿಂದ ಸಕಲಸನುಮತವನರಿದೆನಯ್ಯಾ.