ಆದಿ ತ್ರೈಯುಗದಲ್ಲಿ ದೇವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿ ತ್ರೈಯುಗದಲ್ಲಿ ದೇವ ದಾನವ ಮಾನವರು ಮಾಯಾಮೋಹದಲ್ಲಿ ಹುಟ್ಟಿ ತೊಳಲಿ ಬಳಲುತ್ತೈದಾರೆ ! ಆವ ವೇಷವಾದಡೇನು? ತಾಮಸಧಾರಿಗಳು
ಕಾಮ ಕ್ರೋಧ ಲೋಭ ಬಿಡದ ನಾನಾ ವಿಧದ ಡಂಬಕರು ! ಹೂಳದ ಹುಣ್ಣಿಂಗೆ ಆರಯ್ಯಾ ಮದ್ದನಿಕ್ಕುವರು ? ಇದೇನು ಗುಹೇಶ್ವರ? ಸೋರೆಯ ಬಣ್ಣದ ಹಿರಿಯರು !