ಆದಿ ಭಕ್ತ

ವಿಕಿಸೋರ್ಸ್ದಿಂದ


Pages   (key to Page Status)   

ಆದಿ ಭಕ್ತ, ಅನಾದಿ ಜಂಗಮ, ಆದಿ ಶಕ್ತಿ, ಅನಾದಿ ಶಿವನು ನೋಡಾ. ಎನ್ನ ಆದಿಪಿಂಡಕ್ಕೆ ನೀನೆ ಆಧಾರವಾಗಿ ತೋರಿದಡೆ [ಎನ್ನ] ಹೃದಯಕಮಲದಲ್ಲಿ ನಿಮ್ಮ ಕಂಡೆನು. ಆ ಕಾಂಬ ಜ್ಞಾನವೆ ಜಂಗಮ, ಆ ಜಂಗಮವಿಡಿದಲ್ಲದೆ ಲಿಂಗವ ಕಾಣಬಾರದು. ಆ ಜಂಗಮವಿಡಿದಲ್ಲದೆ ಗುರುವ ಕಾಣಬಾರದು, ಆ ಜಂಗಮವಿಡಿದಲ್ಲದೆ ಪ್ರಸಾದವ ಕಾಣಬಾರದು. ಕಾಯ ಭಕ್ತ, ಪ್ರಾಣ ಜಂಗಮವೆಂಬ ವಚನವ ತಿಳಿಯಲು ಎನ್ನ ಪ್ರಾಣ ನೀವಲ್ಲದೆ ಮತ್ತಾರು ಹೇಳಯ್ಯಾ ಇದು ಕಾರಣ, ನಿಮ್ಮ ಘನವ ಕಿರಿದು ಮಾಡಿ, ಎನ್ನನೊಂದು ಘನವ ಮಾಡಿ ನುಡಿವಿರಿ, ಕೂಡಲಸಂಗಮದೇವಾ. ಆದಿ ಭಕ್ತ
ಅನಾದಿ ಜಂಗಮ
ಆದಿ ಶಕ್ತಿ
ಅನಾದಿ ಶಿವನು ನೋಡಾ. ಎನ್ನ ಆದಿಪಿಂಡಕ್ಕೆ ನೀನೆ ಆಧಾರವಾಗಿ ತೋರಿದಡೆ [ಎನ್ನ] ಹೃದಯಕಮಲದಲ್ಲಿ ನಿಮ್ಮ ಕಂಡೆನು. ಆ ಕಾಂಬ ಜ್ಞಾನವೆ ಜಂಗಮ
ಆ ಜಂಗಮವಿಡಿದಲ್ಲದೆ ಲಿಂಗವ ಕಾಣಬಾರದು. ಆ ಜಂಗಮವಿಡಿದಲ್ಲದೆ ಗುರುವ ಕಾಣಬಾರದು
ಆ ಜಂಗಮವಿಡಿದಲ್ಲದೆ ಪ್ರಸಾದವ ಕಾಣಬಾರದು. ಕಾಯ ಭಕ್ತ
ಪ್ರಾಣ ಜಂಗಮವೆಂಬ ವಚನವ ತಿಳಿಯಲು ಎನ್ನ ಪ್ರಾಣ ನೀವಲ್ಲದೆ ಮತ್ತಾರು ಹೇಳಯ್ಯಾ ಇದು ಕಾರಣ
ನಿಮ್ಮ ಘನವ ಕಿರಿದು ಮಾಡಿ
ಎನ್ನನೊಂದು ಘನವ ಮಾಡಿ ನುಡಿವಿರಿ
ಕೂಡಲಸಂಗಮದೇವಾ.



"https://kn.wikisource.org/w/index.php?title=ಆದಿ_ಭಕ್ತ&oldid=79925" ಇಂದ ಪಡೆಯಲ್ಪಟ್ಟಿದೆ