ಆಧಾರದಲ್ಲಿ ಬ್ರಹ್ಮ ಸ್ವಾಯತವಾದ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಧಾರದಲ್ಲಿ ಬ್ರಹ್ಮ ಸ್ವಾಯತವಾದ
ಸ್ವಾದಿಷಾ*ನದಲ್ಲಿ ವಿಷ್ಣು ಸ್ವಾಯತವಾದ. ಮಣಿಪೂರಕದಲ್ಲಿ ರುದ್ರ ಸ್ವಾಯತವಾದ
ಅನಾಹತದಲ್ಲಿ ಈಶ್ವರ ಸ್ವಾಯತವಾದ. ವಿಶುದ್ಧಿಯಲ್ಲಿ ಸದಾಶಿವ ಸ್ವಾಯತವಾದ
ಆಜ್ಞೆಯಲ್ಲಿ ಉಪಮಾತೀತ ಸ್ವಾಯತವಾದ._ ಇವರೆಲ್ಲರು; ಬಯಲಲ್ಲಿ ಹುಟ್ಟಿ ಬಯಲಲ್ಲಿ ಬೆಳೆದು
ಬಯಲಲಿಂಗವನೆ ಧರಿಸಿಕೊಂಡು
ಬಯಲನೆ ಆರಾಧಿಸಿ ಬಯಲಾಗಿ ಹೋಯಿತ್ತ ಕಂಡೆ ಗುಹೇಶ್ವರಾ