Library-logo-blue-outline.png
View-refresh.svg
Transclusion_Status_Detection_Tool

ಆನೆಯನೇರಿಕೊಂಡು ಹೋದಿರೇ ನೀವು

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಆನೆಯನೇರಿಕೊಂಡು ಹೋದಿರೇ ನೀವು, ಕುದುರೆಯನೇರಿಕೊಂಡು ಹೋದಿರೇ ನೀವು, ಕುಂಕುಮ ಕಸ್ತೂರಿಯ ಹೂಸಿಕೊಂಡು ಹೋದಿರೇ ಅಣ್ಣಾ ! ಸತ್ಯದ ನಿಲವನರಿಯದೆ ಹೋದಿರಲ್ಲಾ, ಸದ್ಗುಣವೆಂಬ ಫಲವ ಬಿತ್ತದೆ ಬೆಳೆಯದೆ ಹೋದಿರಲ್ಲಾ ! ಅಹಂಕಾರವೆಂಬ ಸದಮದಗಜವೇರಿ ವಿಧಿಗೆ ಗುರಿಯಾಗಿ ನೀವು ಹೋದಿರಲ್ಲಾ ! ನಮ್ಮ ಕೂಡಲಸಂಗಮದೇವನರಿಯದೆ ನರಕಕ್ಕೆ ಭಾಜನವಾದಿರಲ್ಲಾ ! ಆನೆಯನೇರಿಕೊಂಡು ಹೋದಿರೇ ನೀವು
ಕುದುರೆಯನೇರಿಕೊಂಡು ಹೋದಿರೇ ನೀವು
ಕುಂಕುಮ ಕಸ್ತೂರಿಯ ಹೂಸಿಕೊಂಡು ಹೋದಿರೇ ಅಣ್ಣಾ ! ಸತ್ಯದ ನಿಲವನರಿಯದೆ ಹೋದಿರಲ್ಲಾ
ಸದ್ಗುಣವೆಂಬ ಫಲವ ಬಿತ್ತದೆ ಬೆಳೆಯದೆ ಹೋದಿರಲ್ಲಾ ! ಅಹಂಕಾರವೆಂಬ ಸದಮದಗಜವೇರಿ ವಿಧಿಗೆ ಗುರಿಯಾಗಿ ನೀವು ಹೋದಿರಲ್ಲಾ ! ನಮ್ಮ ಕೂಡಲಸಂಗಮದೇವನರಿಯದೆ ನರಕಕ್ಕೆ ಭಾಜನವಾದಿರಲ್ಲಾ !