ಆಯತಲಿಂಗವಿಡಿದು ಸ್ವಾಯತಲಿಂಗವ ಕಾಣಬೇಕು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಯತಲಿಂಗವಿಡಿದು ಸ್ವಾಯತಲಿಂಗವ ಕಾಣಬೇಕು ಸಿದ್ಧರಾಮಯ್ಯಾ. ಸ್ವಾಯತಲಿಂಗವಿಡಿದು ಸನ್ನಹಿತಲಿಂಗವ ಕಾಣಬೇಕು ಸಿದ್ಧರಾಮಯ್ಯಾ. ಸನ್ನಹಿತಲಿಂಗವಿಡಿದು ಮಹಾಲಿಂಗವ ಕಾಣಬೇಕು ಸಿದ್ಧರಾಮಯ್ಯಾ. ಮಹಾಲಿಂಗವಿಡಿದು ಜಂಗಮಲಿಂಗವ ಕಾಣಬೇಕು ಸಿದ್ಧರಾಮಯ್ಯಾ. ಜಂಗಮಲಿಂಗವಿಡಿದು ಶಿವಲಿಂಗವ ಕಾಣಬೇಕು ಸಿದ್ಧರಾಮಯ್ಯಾ. ಶಿವಲಿಂಗವಿಡಿದು ಗುರುಲಿಂಗವ ಕಾಣಬೇಕು ಸಿದ್ಧರಾಮಯ್ಯಾ. ಗುರುಲಿಂಗವಿಡಿದು ಆಚಾರಲಿಂಗವ ಕಾಣಬೇಕು ಸಿದ್ಧರಾಮಯ್ಯಾ_ ಇಂತೀ ಆಚಾರಲಿಂಗವಿಡಿದು ಷಟ್‍ಸ್ಥಲದ ಆದಿ ಮಧ್ಯಾಂತವರಿದು
ಸಂಬಂಧಿಸಿ
ಒಂದು ಮಾಡಿಕೊಂಡಿಪ್ಪ ಈ ಕರಸ್ಥಲದನುವ
ಗುಹೇಶ್ವರನ ಶರಣ ಸಂಗನಬಸವಣ್ಣ ಬಲ್ಲ. ಬೆಸಗೊಂಬ ಬಾರಾ ಸಿದ್ಧರಾಮಯ್ಯಾ.