ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ; ಆಯುಷ್ಯ ತೀರಿ ಪ್ರಳಯ ಬಂದಡೆ ಆ ಅರ್ಥವನುಂಬುವರಿಲ್ಲ. ನೆಲನನಗೆದು ಮಡುಗದಿರಾ, ನೆಲ ನುಂಗಿದಡುಗುಳುವುದೆ ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ, ಉಣ್ಣದೆ ಹೋಗದಿರಾ ! ನಿನ್ನ ಮಡದಿಗಿರಲೆಂದಡೆ, ಆ ಮಡದಿಯ ಕೃತಕ ಬೇರೆ; ನಿನ್ನ ಒಡಲು ಕಡೆಯಲು ಮತ್ತೊಬ್ಬನಲ್ಲಿಗೆ ಅಡಕದೆ ಮಾಬಳೆ ಹೆರರಿಗಿಕ್ಕಿ ಹೆಗ್ಗುರಿಯಾಗಿ ಕೆಡಬೇಡ, ಕೂಡಲಸಂಗನ ಶರಣರಿಗೆ ಒಡನೆ ಸವೆಸುವುದು. 201 ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ; ಆಯುಷ್ಯ ತೀರಿ ಪ್ರಳಯ ಬಂದಡೆ ಆ ಅರ್ಥವನುಂಬುವರಿಲ್ಲ. ನೆಲನನಗೆದು ಮಡುಗದಿರಾ
ನೆಲ ನುಂಗಿದಡುಗುಳುವುದೆ ಕಣ್ಣಿನಲ್ಲಿ ನೋಡಿ
ಮಣ್ಣಿನಲ್ಲಿ ನೆರಹಿ
ಉಣ್ಣದೆ ಹೋಗದಿರಾ ! ನಿನ್ನ ಮಡದಿಗಿರಲೆಂದಡೆ
ಆ ಮಡದಿಯ ಕೃತಕ ಬೇರೆ; ನಿನ್ನ ಒಡಲು ಕಡೆಯಲು ಮತ್ತೊಬ್ಬನಲ್ಲಿಗೆ ಅಡಕದೆ ಮಾಬಳೆ ಹೆರರಿಗಿಕ್ಕಿ ಹೆಗ್ಗುರಿಯಾಗಿ ಕೆಡಬೇಡ
ಕೂಡಲಸಂಗನ ಶರಣರಿಗೆ ಒಡನೆ ಸವೆಸುವುದು. 201