ಆಯುಷ್ಯ ಹೋಗುತ್ತಿದೆ, ಭವಿಷ್ಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಯುಷ್ಯ ಹೋಗುತ್ತಿದೆ
ಭವಿಷ್ಯ ತೊಲಗುತ್ತಿದೆ
ಕೂಡಿರ್ದ ಸತಿಸುತರು ತಮತಮಗೆ ಹರಿದು ಹೋಗುತ್ತೈದಾರೆ ; ಬೇಡ ಬೇಡವೆಲೆ ಬಂಜೆಯಾಗಿ ಕೆಡಬೇಡ ಬಯಲಿಂಗೆ ಮನವೆ
ಚೆನ್ನಮಲ್ಲಿಕಾರ್ಜುನನ ಶರಣರ ಸಂಗದಲ್ಲಿ
ಹೂಣಿ ಹೊಕ್ಕು ಬದುಕು ಕಂಡಾ
ಮನವೆ.