ಆರು ಬಣ್ಣದ ಮೃಗವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆರು ಬಣ್ಣದ ಮೃಗವು ತೋರಿಯಡಗಿತ್ತು. ಬಯಲ ಮೂರು ಲೋಕದೊಳಗೆ ಸಾರಿ
ಹೆಜ್ಜೆಯ ನೋಡಿ ತೊರೆಯ ಬೆಂಬಳಿವಿಡಿದು ತೋಹಿನಲ್ಲಿಗೆ ಬಂದಿತ್ತು
ಮೃಗವು. ``ಸ್ಯೋಹಂ ಸ್ಯೋಹಂ ಎನ್ನುತ್ತಿದ್ದಿತ್ತು
ಇಹಪರವ ಮೀರಿ ನಿಂದಿತ್ತು. ತೋರಲಿಲ್ಲದ ಬಿಲ್ಲು ಬೇರೆನಿಸದ ಬಾಣ
ಅರುಹಿನ ಕೈಯಲ್ಲಿ ಕುರುಹ ಬಾಣಸವ ಮಾಡಿ ತೆರಹಿಲ್ಲದ ಪಾದಕದಲ್ಲಿ (ಶಾಖದಲ್ಲಿ?) ಅಡಿಗೆಯ ಮಾಡಿದ ಬೋನವ ಅರ್ಪಿತವ ಮಾಡಿದ ಪ್ರಸಾದದಿಂದ ಸುಖಿಯಾದೆ ಗುಹೇಶ್ವರಾ.