ಆರೂ ಇಲ್ಲದ ಅರಣ್ಯದೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆರೂ ಇಲ್ಲದ ಅರಣ್ಯದೊಳಗೆ ಮನೆಯ ಕಟ್ಟಿದರೆ
ಕಾಡುಗಿಚ್ಚು ಎದ್ದುಬಂದು ಹತ್ತಿತ್ತಲ್ಲಾ ! ಆ ಉರಿಯೊಳಗೆ ಮನೆ ಬೇವಲ್ಲಿ
ಮನೆಯೊಡೆಯನೆತ್ತ ಹೋದನೊ? ಆ ಉರಿಯೊಳಗೆ ಬೆಂದ ಮನೆ
ಚೇಗೆಯಾಗುದದ ಕಂಡು
ಮನೆಯೊಡೆಯನಳಲುತ್ತ ಬಳಲುತ್ತೈದಾನೆ. ಗುಹೇಶ್ವರಾ
ನಿಮ್ಮ ಒಲವಿಲ್ಲದಠಾವ ಕಂಡು
ಮನದಲ್ಲಿ ಹೇಸಿ ತೊಲಗಿದೆನಯ್ಯಾ.