ಆಳುತನದ ಮಾತನೇರಿಸಿ ನುಡಿದಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಳುತನದ ಮಾತನೇರಿಸಿ ನುಡಿದಡೆ ಆಗಳೆ ಕಟ್ಟಿದೆನು ಗಂಡುಗಚ್ಚೆಯ. ತಿಗುರನೇರಿಸಿ ತಿಲಕವನಿಟ್ಟು ಕೈದುವ ಕೊಂಡು ಕಳನೇರಿದ ಬಳಿಕ
ಕಟ್ಟಿದ ನಿರಿ ಸಡಿಲಿದಡೆ ಇನ್ನು ನಿಮ್ಮಾಣೆ
ಕಾಣಾ ಚೆನ್ನಮಲ್ಲಿಕಾರ್ಜುನಾ.