ಆಳುದ್ದಿಯದೊಂದು ಬಾವಿ ಆಕಾಶದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಳುದ್ದಿಯದೊಂದು ಬಾವಿ ಆಕಾಶದ ಮೇಲೆ ಹುಟ್ಟಿತ್ತು ನೋಡಾ ! ಆ ಬಾವಿಯ ನೀರನೊಂದು ಮೃಗ ಬಂದು ಕುಡಿಯಿತ್ತು. ಕುಡಿಯ ಬಂದ ಮೃಗವು ಆ ನೀರೊಳಗೆ ಮುಳಿಗಿದಡೆ ಉರಿಯ ಬಾಣದಲೆಚ್ಚು ತೆಗೆದೆ ನೋಡಾ ! ಒಂದೆ ಬಾಣದಲ್ಲಿ ಸತ್ತ ಮೃಗವು
ಮುಂದಣ ಹೆಜ್ಜೆಯನಿಕ್ಕಿತ್ತ ಕಂಡೆ ! ಅಂಗೈಯೊಳಗೊಂದು ಕಂಗಳು ಮೂಡಿ
ಸಂಗದ ಸುಖವು ದಿಟವಾಯಿತ್ತು ! ಲಿಂಗಪ್ರಾಣವೆಂಬುದರ ನಿರ್ಣಯವನು ಇಂದು ಕಂಡೆನು ಗುಹೇಶ್ವರಾ.