ಆವಾವ ಪರಿಯಲ್ಲಿ ಆವಾವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆವಾವ ಪರಿಯಲ್ಲಿ ಆವಾವ ಭಾವದಲ್ಲಿ ಗುರುಲಿಂಗಜಂಗಮಕ್ಕೆ ದಾಸೋಹವ ಮಾಡಿಹೆನೆಂಬ
ಕೂಡಿಹೆನೆಂಬ ಸದ್ಭಕ್ತರ ಬಾಗಿಲ ತೋರಿ ಬದುಕಿಸಯ್ಯಾ. ಎಲ್ಲವನೊಪ್ಪಿ `ಲಿಂಗಜಂಗಮವೆನ್ನ ಪ್ರಾಣೇಶ್ವರ' ಎಂಬ ಮಹಾಪುರಾತನರ ಪಾದರಕ್ಷೆಯ ಹೊತ್ತಿರಿಸೆನ್ನನು ಕೂಡಲಚೆನ್ನಸಂಗಮದೇವಾ.