ಆವ ಕ್ರಿಯೆಗಾದಡೂ ಕಾರ್ಯಕ್ಕಾದಡೂ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆವ ಕಾರ್ಯಕ್ಕಾದಡೂ ಶ್ರೀ ವಿಭೂತಿಯೇ ಬೇಕು. ಆವ ಕ್ರಿಯೆಗಾದಡೂ ಶ್ರೀ ವಿಭೂತಿಯೇ ಬೇಕು. ಆವನೊಬ್ಬ ಶ್ರೀ ವಿಭೂತಿಯ ಧರಿಸದೆ ವೇದವನೋದಿದಡೇನು ? ಆತನೋದಿದ ವೇದಂಗಳು ವ್ಯರ್ಥ ಕಾಣಿರೋ ! ಆವನೊಬ್ಬ ಶ್ರೀ ವಿಭೂತಿಯ ಧರಿಸದೆ ಯಜ್ಞಂಗಳ ಮಾಡಿದಡೇನು ? ಆತ ಮಾಡಿದ ಯಜ್ಞಂಗಳು ವ್ಯರ್ಥ ಕಾಣಿರೋ ! ಆವನೊಬ್ಬ ಶ್ರೀವಿಭೂತಿಯ ದಾನಂಗಳ ಮಾಡಿದಡೇನು ? ಆತ ಮಾಡಿದ ದಾನಂಗಳು ವ್ಯರ್ಥ ಕಾಣಿರೋ ! ಆವನೊಬ್ಬ ಶ್ರೀ ವಿಭೂತಿಯ ಧರಿಸದೆ ತಪವ ಮಾಡಿದಡೇನು ? ಆತ ಮಾಡಿದ ತಪ ವ್ಯರ್ಥ ಕಾಣಿರೋ ! ಆವನೊಬ್ಬ ಶ್ರೀ ವಿಭೂತಿಯ ಧರಿಸದೆ ನಿತ್ಯ ನೇಮ ವ್ರತ ಉಪವಾಸಂಗಳಂ ಮಾಡಿದಡೇನು ? ಆತ ಮಾಡಿದ ನಿತ್ಯ ನೇಮ ವ್ರತ ಉಪವಾಸಂಗಳು ವ್ಯರ್ಥ ಕಾಣಿರೋ ! ಅದೆಂತೆಂದೊಡೆ :ಬೋಧಾಯನ ಸ್ಮೃತೌ- ``ವೃಥಾ ವೇದಾ ವೃಥಾ ಯಜ್ಞಾ ವೃಥಾ ದಾನಂ ವೃಥಾ ತಪಃ