ಆವ ಜಾತಿಯಾದಡೂ ಆಗಲಿ;

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆವ ಜಾತಿಯಾದಡೂ ಆಗಲಿ; ಪುರಾತನ ಚಾರಿತ್ರದಲ್ಲಿ ನಡೆದು
ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನಮಂ ಕೊಟ್ಟು
ಅಹಂಕಾರವಳಿದಿಹಂತಹ ಮಹಾತ್ಮರ ಬಾಯ ತಂಬುಲವ ಮೆಲುವೆ
ಬೀಳುಡಿಗೆಯ ಹೊದಿವೆ. ಅವರ ಪಾದರಕ್ಷೆಗಳೆರಡನೂ
ಮಂಡೆಯ ಮೇಲೆ ಹೊತ್ತುಕೊಂಡು ಬದುಕುವೆನಯ್ಯಾ. ಆ ಗಣಂಗಳ ದಾಸನ ದಾಸ ನಾನು
ಜನ್ಮ ಜನ್ಮದಲ್ಲಿ ಆಗುವೆ ಕಾಣಾ ಗುಹೇಶ್ವರಾ