ಆಸೆಗೆ ಸತ್ತುದು ಕೋಟಿ ಆಮಿಷಕ್ಕೆ ಸತ್ತುದು ಕೋಟಿ ಹೊನ್ನು ಹೆಣ್ಣು ಮಣ್ಣಿಂಗೆ ಸತ್ತುದು ಕೋಟಿ. ಗುಹೇಶ್ವರಾ ನಿಮಗಾಗಿ ಸತ್ತವರನಾರನೂ ಕಾಣೆ.