ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ, ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ ! ಕರುಣಾಕರ, ಅಭಯಕರ, ವರದ, ನೀ ಕರುಣಿಸಯ್ಯಾ. ಸಂಸಾರಬಂಧನವನು ಮಾಣಿಸಿ, ಎನಗೆ ಕೃಪೆಯ ಮಾಡಿ, ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು, ಭಕ್ತಜನಮನೋವಲ್ಲ ಕೂಡಲಸಂಗಮದೇವಾ. 69 ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ
ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ ! ಕರುಣಾಕರ
ಅಭಯಕರ
ವರದ
ನೀ ಕರುಣಿಸಯ್ಯಾ. ಸಂಸಾರಬಂಧನವನು ಮಾಣಿಸಿ
ಎನಗೆ ಕೃಪೆಯ ಮಾಡಿ
ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು
ಭಕ್ತಜನಮನೋವಲ್ಲ ಕೂಡಲಸಂಗಮದೇವಾ. 69